ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ರೈತರುಗಳು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರುಗಳು ಆರ್ಥಿಕವಾಗಿ ಸದೃಢರಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂಬ ದೂರದೃಷ್ಟಿಯ ಫಲವಾಗಿ ಗುಂಡಾಲ್ ಜಲಾಶಯ, ಹುಬ್ಬೆ ಹುಣಸೆ, ರಾಮನಗುಡ್ಡ, ಉಡುತೊರೆ ಜಲಾಶಯ, ಕೌಳಿ ಹಳ್ಳ ಡ್ಯಾಮ್, ಹೂಗ್ಯಂ ಜಲಾಶಯ, ಕಿರೇ ಪಾತಿ ಜಲಾಶಯ, ಗೋಪಿನಾಥಂ ಜಲಾಶಯವನ್ನು ನಮ್ಮ ತಂದೆಯವರಾದ ದಿ.ಜಿ ರಾಜುಗೌಡ ಹಾಗೂ ದೊಡ್ಡಪ್ಪ ದಿ. ಜಿ.ವೆಂಕಟೇಗೌಡರವರ ಶಾಸಕರಾಗಿದ್ದಾಗ ನಿರ್ಮಾಣ ಮಾಡಲಾಗಿದೆ.
ಹುಬ್ಬೆ ಹುಣಸೆ ಜಲಾಶಯ ಮಾತ್ರ ನನ್ನ ಅವಧಿಯಲ್ಲಿ 5.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಜಲಾಶಯಗಳಿಗೆ ನೀರು ತುಂಬಿದರೆ 40 ಸಾವಿರ ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ 127 ಕೋಟಿ ವೆಚ್ಚದಲ್ಲಿ ಗುಂಡಾಲ್, ರಾಮನಗುಡ್ಡ, ಹುಬ್ಬೆ ಹುಣಸೆ ಜಲಾಶಯಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಅಂತಿಮ ಹಂತದಲ್ಲಿದೆ. ಅನುದಾನದ ಕೊರತೆಯಿಂದ ರಾಮನ ಗುಡ್ಡ ಹಾಗೂ ಹುಬ್ಬೆ ಹುಣಸೆ ಜಲಾಶಯಕ್ಕೆ ನೀರು ತುಂಬಿಸುವ ಕಾಮಗಾರಿ ಸ್ಥಗಿತವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಅವರಿಗೆ ಒಂಬತ್ತು ಕೋಟಿ ಅನುದಾನ ನೀಡುವಂತೆ ಮನವಿ ನೀಡಲಾಗಿದ್ದು ಅವರು ಸಹ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅನುದಾನ ನೀಡಿದ ತಕ್ಷಣ ಕಾಮಗಾರಿ ಪೂರ್ಣಗೊಂಡರೆ ಸುಮಾರು 20,000 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.
1400 ಕೋಟಿ ಯೋಜನೆಗಳಿಗೆ ಕ್ರಿಯಾಯೋಜನೆ:
ನಾನು ಮೂರನೇ ಬಾರಿ ಶಾಸಕನಾಗಿದ್ದಾಗ ಉಡುತೊರೆ ಜಲಾಶಯಕ್ಕೆ ಕೆರೆ ನೀರು ತುಂಬಿಸಲು 200 ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಮಾಡಿ ಕಳುಹಿಸಲಾಗಿತ್ತು. ಅನುಮೋದನೆ ಹಂತಕ್ಕೆ ತಲುಪಿದ ನಂತರ ಅದು ಸ್ಥಗಿತವಾಗಿದೆ. ಈ ಬಾರಿ ಈ ಯೋಜನೆಗೂ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಇದಲ್ಲದೆ ಮುಖ್ಯ ಕಾಲುವೆ, ತೋಬು ಕಾಲುವೆ, ಹಾಗೂ ಕಾಲುವೆಗಳಲ್ಲಿ ತುಂಬಿರುವ ಹೂಳು ತೆಗೆಯಲು ಅನುದಾನ ಕೇಳಿದ್ದು ಸರ್ಕಾರ ಅನುದಾನ ನೀಡಿದರೆ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.
12 ಹಾಡಿಗಳಿಗೆ ವಿದ್ಯುತ್ ಸಂಪರ್ಕ:
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 32 ಹಾಡಿಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ತೊಂದರೆ ಅನುಭವಿಸುತ್ತಿದ್ದರು ನಾನು ಶಾಸಕನಾಗಿ ಆಯ್ಕೆಯಾದ ನಂತರ 20 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕೊಡಿಸಿದ್ದೇನೆ. ಉಳಿದ 12 ಹಾಡುಗಳಿಗೂ ವಿದ್ಯುತ್ ಸಂಪರ್ಕ ನೀಡಲು ಕ್ರಿಯೆ ಯೋಜನೆ ಮಾಡಿ ಅನುಮೋದನೆಗಾಗಿ ಕಳುಹಿಸಲಾಗಿತ್ತು .ಈಗ ಅನುಮೋದನೆ ಸಿಕ್ಕಿದ್ದು ಅತಿ ಶೀಘ್ರದಲ್ಲಿಯೇ ಈ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಕೊಳ್ಳೇಗಾಲ, ಯಳಂದೂರು, ಹನೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗೋವಿಂದ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್ ಹರೀಶ್ ನವೀನ್, ಮುಖಂಡರಾದ ವೆಂಕಟರಮಣ ನಾಯ್ಡು, ಕಾಮಗೆರೆ ಕುಮಾರ್ ಗೌಡ, ನವನೀತ್ ಗೌಡ, ಕಾಮಗೆರೆ ರವಿ, ಪ್ರದೀಪ್, ಉದ್ದನೂರು ಸಿದ್ದರಾಜು, ಚೇತನ್ ದೊರೆರಾಜು, ಚಿಕ್ಕ ಮಾಲಾಪುರ ಅಂಕರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…