ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರೈತರು ಹಾಗೂ ಸಾರ್ವಜನಿಕರು ನೀಡಿದ ಮನವಿ ಪತ್ರಗಳನ್ನ ಕಸದ ಬುಟ್ಟಿಗೆ ಎಸೆದಿರುವುದನ್ನ ಖಂಡಿಸಿ ಗುಂಡ್ಲುಪೇಟೆಯಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಸಂಘಟನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ರೈತರು ಹೆದ್ದಾರಿ ಮೂಲಕ ಸಾಗಿ KSRTC ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಸಮಸ್ಯೆಗಳ ಕುರಿತು ರೈತರು ನೀಡಿದ್ದ ಮನವಿ ಪತ್ರಗಳನ್ನ ಕಸದ ಬುಟ್ಟಿಗೆ ಹಾಕುವ ಮೂಲಕ ಸಿದ್ದರಾಮಯ್ಯ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಇದು ರಾಜ್ಯ ಎಲ್ಲಾ ರೈತರಿಗೆ ಮಾಡಿದ ಅವಮಾನ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…