Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಹನೂರು| ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ: ನಾಲ್ವರು ಆರೋಪಿಗಳ ಬಂಧನ

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ ದೊಡ್ಡಿ ಗ್ರಾಮದ ಮಹದೇವ ಪ್ರಭು ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ: ಕಾಡಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 7.600 ಗ್ರಾಂ ಒಣ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಹೀರೋ ಹೋಂಡಾ ಫ್ಯಾಷನ್ ಪ್ರೊಬೈಕ್‌, ಬಜಾಜ್ ಪಲ್ಸರ್ ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!