ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ ದೊಡ್ಡಿ ಗ್ರಾಮದ ಮಹದೇವ ಪ್ರಭು ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಕಾಡಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 7.600 ಗ್ರಾಂ ಒಣ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಹೀರೋ ಹೋಂಡಾ ಫ್ಯಾಷನ್ ಪ್ರೊಬೈಕ್, ಬಜಾಜ್ ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…