Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ: ಡಿಸಿ ಶಿಲ್ಪಾನಾಗ್‌

ಚಾಮರಾಜನಗರ: ಮಾರ್ಚ್‌ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಮಾಹಿತಿ ನೀಡಿದ್ದಾರೆ.

ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಿಯುಸಿಗೆ 17 ಪರೀಕ್ಷಾ ಕೇಂದ್ರ, ಎಸ್‌ಎಸ್‌ಎಲ್‌ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಿಯುಸಿ ಪರೀಕ್ಷೆಯನ್ನು ಒಟ್ಟು 7,364 ಹಾಗೂ ಎಸ್‌ಎಸೆಲ್‌ಸಿ ಪರೀಕ್ಷೆಯನ್ನು 12,432 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಎಲ್ಲದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ಶಿಲ್ಪಾನಾಗ್‌ ತಿಳಿಸಿದ್ದಾರೆ.

 

Tags:
error: Content is protected !!