ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ.
ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪಿಯುಸಿಗೆ 17 ಪರೀಕ್ಷಾ ಕೇಂದ್ರ, ಎಸ್‌ಎಸ್‌ಎಲ್‌ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪಿಯುಸಿ ಪರೀಕ್ಷೆಯನ್ನು ಒಟ್ಟು 7,364 ಹಾಗೂ ಎಸ್‌ಎಸೆಲ್‌ಸಿ ಪರೀಕ್ಷೆಯನ್ನು 12,432 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಎಲ್ಲದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…