Mysore
27
scattered clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಚಾ.ನಗರದಲ್ಲಿ ಧ್ರುವನಾರಾಯಣ ಹುಟ್ಟುಹಬ್ಬ ಆಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Free Health Check-up Camp Held in Chamarajanagar to Mark Dhruvanarayan’s Birthday Celebration

ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರ್.ಧ್ರುವನಾರಾಯಣ ಅವರ ೬೪ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ ಫೇಜ್ ಇಂಡಿಯಾ, ಬೃಂದವನ ಆಸ್ಪತ್ರೆ, ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಎರಡು ಬಾರಿ ಶಾಸಕರಾಗಿ, ಸಂಸದರಾಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಎಲ್ಲರ ಮನಗೆದ್ದಿದ್ದರು. ಧ್ರುವನಾರಾಯಣ ಅವರದು ಎಂದೂ ಮರೆಯಲು ಸಾಧ್ಯವಾಗದ ವ್ಯಕ್ತಿತ್ವ. ಬಡವರ ಪರ ಮಾತನಾಡುತ್ತಿದ್ದರು. ಅವರನ್ನು ಸ್ಮರಿಸಿ ಕೊಳ್ಳುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದರು.

ಧ್ರುವನಾರಾಯಣರ ಅಭಿಮಾನಿ ಬಳಗದ ಅಧ್ಯಕ್ಷರಾದ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಅವರ ಹುಟ್ಟುಹಬ್ಬವನ್ನು ಸರಳವಾಗಿ, ಸೇವಾ ಕಾರ್ಯದೊಂದಿಗೆ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಚುಡಾಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಹೊಂಗನೂರು ಚಂದ್ರು, ಕನಿಷ್ಠ ವೇತನಾ ಸಲಹಾ ಸಮಿತಿ ಮಂಡಳಿ ಮಾಜಿ ಅಧ್ಯಕ್ಷ ಎಸ್‌ಪಿಕೆ ಉಮೇಶ್, ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಸದಸ್ಯರಾದ ಎಸ್.ಸೋಮನಾಯಕ, ಕೆ.ಪಿ.ಸದಾಶಿವಮೂರ್ತಿ, ಕೇತಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಖಾನ್, ಸೈಯದ್ ರಫಿ, ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಬಿ.ಕೆ.ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಸೋಮೇಶ್, ಮಾಜಿ ಅಧ್ಯಕ್ಷ ನಾಗೇಂದ್ರ, ನಿರ್ದೇಶಕ ಆಲೂರು ಪ್ರದೀಪ್, ತಾ.ಪಂ.ಮಾಜಿ ಸದಸ್ಯರಾದ ಡಿ.ಪಿ.ಪ್ರಕಾಶ, ಶಿವಸ್ವಾಮಿ, ವಕೀಲರಾದ ಅರುಣ್, ನಾಗರತ್ನ, ಶಕುಂತಲಾ ಇತರರು ಹಾಜರಿದ್ದರು.

Tags:
error: Content is protected !!