ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ರವರು ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಆಯ್ಕೆಯಾಗಿ ಪಂಜಾಬ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಕಳೆದ ಎರಡು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿದ್ದರು.
ಇವರ ಸಾವಿನ ಮಾಹಿತಿಯನ್ನು ಕುಟುಂಬಸ್ಥರಿಗೆ ತಿಳಿಸಿ, ಕುಟುಂಬಸ್ಥರು ಪಂಜಾಬ್ ಗೆ ತೆರಳಿ ಅಲ್ಲಿಂದ ಮೃತ ದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ತರಲಾಯಿತು.
ನಂತರ ಕ್ರಿಶ್ಚಿಯನ್ ಸಮಾಜದ ಸಂಪ್ರದಾಯದಂತೆ ಪಾರ್ಥಿವ ಶರೀರವನ್ನು ಸುಳ್ವಾಡಿ ಗ್ರಾಮದ ಚರ್ಚ್ ನಲ್ಲಿಟ್ಟು ಫಾ ಟೆನ್ನಿ ಕುರಿಯನ್ ರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ನಿವೃತ್ತ ಸೈನಿಕರಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು.
ರಾಮಪುರ ಪೊಲೀಸ್ ರಿಂದ ಗಾರ್ಡ್ ಆಫ್ ಹಾನರ್: ಹೃದಯಘಾತದಿಂದ ಮೃತಪಟ್ಟ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆಯಲ್ಲಿ ರಾಮಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದಲ್ಲಿ ಭಾಗವಹಿಸಿ ಗಾರ್ಡ್ ಆಫ್ ಹಾನರ್ ಹಾಗೂ ಗಾಳಿಯಲ್ಲಿ ಮೂರು ಬಾರಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವದೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯಿಂದ ಶ್ರದ್ಧಾಂಜಲಿ: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು, ಉಪಾಧ್ಯಕ್ಷೆ, ಸದಸ್ಯರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿ ಗೌರವ ಸಲ್ಲಿಸಿದರು. ಇದಲ್ಲದೆ ಅಂತ್ಯಕ್ರಿಯೆಗೆ ಬೇಕಾಗಿದ್ದ ಎಲ್ಲಾ ವ್ಯವಸ್ಥೆಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಕಲ್ಪಿಸಲಾಗಿತ್ತು.
ಯೋಧರ ಗ್ರಾಮದಲ್ಲಿ ನೀರವ ಮೌನ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಯೋಧರ ಗ್ರಾಮವೆಂದೇ ಪ್ರಸಿದ್ಧಿಯಾಗಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 140 ಜನ ಸೈನಿಕರಿದ್ದು 60 ಜನ ನಿವೃತ್ತಿಯಾಗಿದ್ದಾರೆ. ಲೂಯಿಸ್ ಪೆರಿಯನಾಯಗಂ ರವರು ರಾಷ್ಟ್ರಪತಿ ಪದಕವನ್ನು ಪಡೆದುಕೊಂಡು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದು ಗೌರವ ಹೆಚ್ಚಿಸಿದ್ದಾರೆ . ಹಲವಾರು ವರ್ಷಗಳ ಹಿಂದೆ ಕರ್ತವ್ಯದಲ್ಲಿ ಇರುವಾಗಲೇ ಮರಿಯ ಪ್ರಕಾಶ್ ಎಂಬುವವರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. ಇದೀಗ ಜ್ಞಾನ ಪ್ರಕಾಶ್ ಹೃದಯಾಘಾತದಿಂದ ಮೃತಪಟ್ಟಿರುವುದು ಈ ಗ್ರಾಮಕ್ಕೆ ಬರ ಸಿಡಿಲು ಬಡಿದಂತಾಗಿದೆ. ಗ್ರಾಮದಲ್ಲಿ ಎಲ್ಲಿ ನೋಡಿದರೂ ನೀರವ ಮೌನ, ಮೃತ ಯೋಧರ ಅಂತಿಮ ದರ್ಶನ ಪಡೆಯಲು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಅಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…