ಚಾಮರಾಜನಗರ

ಹನೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ರವರು ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಆಯ್ಕೆಯಾಗಿ ಪಂಜಾಬ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಕಳೆದ ಎರಡು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿದ್ದರು.

ಇವರ ಸಾವಿನ ಮಾಹಿತಿಯನ್ನು ಕುಟುಂಬಸ್ಥರಿಗೆ ತಿಳಿಸಿ, ಕುಟುಂಬಸ್ಥರು ಪಂಜಾಬ್ ಗೆ ತೆರಳಿ ಅಲ್ಲಿಂದ ಮೃತ ದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ತರಲಾಯಿತು.

ನಂತರ ಕ್ರಿಶ್ಚಿಯನ್ ಸಮಾಜದ ಸಂಪ್ರದಾಯದಂತೆ ಪಾರ್ಥಿವ ಶರೀರವನ್ನು ಸುಳ್ವಾಡಿ ಗ್ರಾಮದ ಚರ್ಚ್ ನಲ್ಲಿಟ್ಟು ಫಾ ಟೆನ್ನಿ ಕುರಿಯನ್ ರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ನಿವೃತ್ತ ಸೈನಿಕರಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು.

ರಾಮಪುರ ಪೊಲೀಸ್ ರಿಂದ ಗಾರ್ಡ್ ಆಫ್ ಹಾನರ್: ಹೃದಯಘಾತದಿಂದ ಮೃತಪಟ್ಟ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆಯಲ್ಲಿ ರಾಮಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದಲ್ಲಿ ಭಾಗವಹಿಸಿ ಗಾರ್ಡ್ ಆಫ್ ಹಾನರ್ ಹಾಗೂ ಗಾಳಿಯಲ್ಲಿ ಮೂರು ಬಾರಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವದೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯಿಂದ ಶ್ರದ್ಧಾಂಜಲಿ: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು, ಉಪಾಧ್ಯಕ್ಷೆ, ಸದಸ್ಯರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿ ಗೌರವ ಸಲ್ಲಿಸಿದರು. ಇದಲ್ಲದೆ ಅಂತ್ಯಕ್ರಿಯೆಗೆ ಬೇಕಾಗಿದ್ದ ಎಲ್ಲಾ ವ್ಯವಸ್ಥೆಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಕಲ್ಪಿಸಲಾಗಿತ್ತು.

ಯೋಧರ ಗ್ರಾಮದಲ್ಲಿ ನೀರವ ಮೌನ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಯೋಧರ ಗ್ರಾಮವೆಂದೇ ಪ್ರಸಿದ್ಧಿಯಾಗಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 140 ಜನ ಸೈನಿಕರಿದ್ದು 60 ಜನ ನಿವೃತ್ತಿಯಾಗಿದ್ದಾರೆ. ಲೂಯಿಸ್ ಪೆರಿಯನಾಯಗಂ ರವರು ರಾಷ್ಟ್ರಪತಿ ಪದಕವನ್ನು ಪಡೆದುಕೊಂಡು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದು ಗೌರವ ಹೆಚ್ಚಿಸಿದ್ದಾರೆ . ಹಲವಾರು ವರ್ಷಗಳ ಹಿಂದೆ ಕರ್ತವ್ಯದಲ್ಲಿ ಇರುವಾಗಲೇ ಮರಿಯ ಪ್ರಕಾಶ್ ಎಂಬುವವರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು. ಇದೀಗ ಜ್ಞಾನ ಪ್ರಕಾಶ್ ಹೃದಯಾಘಾತದಿಂದ ಮೃತಪಟ್ಟಿರುವುದು ಈ ಗ್ರಾಮಕ್ಕೆ ಬರ ಸಿಡಿಲು ಬಡಿದಂತಾಗಿದೆ. ಗ್ರಾಮದಲ್ಲಿ ಎಲ್ಲಿ ನೋಡಿದರೂ ನೀರವ ಮೌನ, ಮೃತ ಯೋಧರ ಅಂತಿಮ ದರ್ಶನ ಪಡೆಯಲು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಅಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago