ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು ಸತ್ಯಾಗ್ರಹ, ಅಹಿಂಸೆ, ಶಾಂತಿ ಮತ್ತು ತ್ಯಾಗ ಎಂಬ ಅಸ್ತ್ರಗಳನ್ನು ಬಳಸಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು. ಅವರ ತತ್ವ ಸಿದ್ಧಾಂತಗಳು ಎಲ್ಲಾ ಕಾಲಕ್ಕೂ ಮೌಲ್ಯಯುತವಾಗಿದೆ ಎಂದರು.
ಮಹಾತ್ಮ ಗಾಂಧಿಯವರು ಒಬ್ಬಂಟಿ ಮಹಿಳೆ ಮಧ್ಯರಾತ್ರಿಯಲ್ಲಿ ಸುರಕ್ಷಿತವಾಗಿ ಓಡಾಡುವಂತಾಗಬೇಕು. ಆಗ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರ್ಥ ಎಂದು ತಿಳಿಸಿದ್ದರು. ಈ ನಿಟ್ಟಿನಲ್ಲಿ ಅದನ್ನು ನಾವು ಪಾಲಿಸೋಣ ಎಂದರು.
ವಿವಿಧ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಣೆ: ಪಟ್ಟಣ ಪಂಚಾಯಿತಿ ಕಚೇರಿ, ಪೊಲೀಸ್ ಠಾಣೆ, ನೋಂದಣಾಧಿಕಾರಿಗಳ ಕಚೇರಿ, ಕ್ಷೇತ್ರದ ಶಿಕ್ಷಣ ಅಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಶಾಲೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಭಾರ ಕಂದಾಯ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತಾಧಿಕಾರಿ ಕಾರ್ತಿಕ್, ಸಿಬ್ಬಂದಿಗಳಾದ ಸಿದ್ದರಾಜು ಪ್ರದೀಪ್, ಶಿವಕುಮಾರ್ ಹಾಜರಿದ್ದರು