Mysore
26
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಹನೂರು: ಶಾಂತಿ ಅಹಿಂಸೆ ಮತ್ತು ಸತ್ಯದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧೀಜಿಯವರ ಆದರ್ಶ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು.

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿಯೊಬ್ಬರು ಸ್ವತಂತ್ರವಾಗಿ ಬದುಕುತ್ತಿದ್ದಾರೆ ಎಂದರೆ ಅದಕ್ಕೆ ಮಹಾತ್ಮ ಗಾಂಧಿಯವರ ತ್ಯಾಗ ಪರಿಶ್ರಮ ಕಾರಣವಾಗಿದೆ. ಅಂದು ಶಾಂತಿಯುತವಾಗಿ ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಮಹಾತ್ಮ ಗಾಂಧಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಇಂದಿನ ದಿನಗಳಲ್ಲಿ ದೇಶದಲ್ಲಿ ಅಶಾಂತಿ, ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ, ಗಲಭೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು, ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿಶ್ವದಾದ್ಯಂತ ಗಾಂಧಿ ಜಯಂತಿಯನ್ನು ಅಂತರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

Tags: