Mysore
25
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ.

ಪಟ್ಟಣದ ವಾಹಿದ್ ಎಂಬುವವರಿಗೆ ಸೇರಿದ ಗ್ಯಾರೇಜ್ ಮಧ್ಯರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟುಹೋಗಿದೆ. ಲಕ್ಷಾಂತರ ಮೌಲ್ಯದ ಇಂಜೀನ್, ಬ್ಯಾಟರಿಗಳು ಅಟೋಪಾರ್ಟ್ಸ್ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮಾಲೀಕ ವಾಹಿದ್‌ರವರು ಇದು ಶಾರ್ಟ್ ಸರ್ಕ್ಯೂಟ್‌ನಿಂದ ಆಗಿರುವುದಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!