ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ.
ತೇಜಸ್ವಿನಿ ಇಂದು ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಜೆಎಸ್‌ಎಸ್ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆಗೆ ಕರೆ ತರುವಷ್ಟರಲ್ಲಿಯೇ ತೇಜಸ್ವಿನಿ ಮೃತ ಪಟ್ಟಿದ್ದಾಳೆ.
ಈ ವೇಳೆ ಪರಿಶೀಲನೆ ನಡೆಸಿದ ವೈದ್ಯರು ಹೃದಯಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ವೇಳೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…