ಚಾಮರಾಜನಗರ

ಚಾ.ನಗರ: ಮೋದಿ ವಿರುದ್ಧ ಗೋ ಬ್ಯಾಕ್‌ ಚಳವಳಿ ನಡೆಸಿದ ಕಾಂಗ್ರೆಸ್

ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್‌ ಚಳವಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಾವೇಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿ, ಮೋದಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಬರ ನಿರ್ವಹಣೆಗೆ ಕಳೆದ ಸೆಪ್ಟಂಬರ್‌ ತಿಂಗಳಿನಲ್ಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರ ಹಣ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಕೇಂದ್ರದ ಸಚಿವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮನವಿ ಮಾಡಲಾಗಿದೆ. ಹಾಗಿದ್ದರೂ, ಕೇಂದ್ರ ರಾಜ್ಯಕ್ಕೆ ನಯಾಪೈಸೆ ನೀಡಿಲ್ಲ ಎಂದು ದೂರಿದರು.

ಕೇಂದ್ರದ ಬರ ಅಧ್ಯಯನ ತಂಡ ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಿ, ಅದೇ ತಿಂಗಳು 17,901 ಕೋಟಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. ಆದರೂ ಇಷ್ಟು ದಿನ ಸುಮ್ಮನಿರುವುದು ಏಕೆ ಎನ್ನುವುದು ಕನ್ನಡಿಗರ ಪ್ರಶ್ನೆಯಾಗಿದೆ, ಮೋದಿಯವರು ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಪ್ರವಾಹ, ಬರ ಬಂದಾಗ ಬಾರದ ಮೋದಿ ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಚಾರಕ್ಕೆ ಬರುತ್ತಿರುವುದು ದುರಂತ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಅಬ್ಬರದ ಪ್ರಚಾರಕ್ಕೆ ರಾಜ್ಯದ ಜನರು ತಕ್ಕ ಉತ್ತರ ನೀಡಿದ್ದಾರೆ. ಇದೀಗ ಮತ್ತೆ ಮೋದಿ ಬಂದಿದ್ದಾರೆ, ಬರ ಪರಹಾರ ನೀಡದೆ ರಾಜ್ಯಕ್ಕೆ ವಂಚಿಸಿರುವ ಬಿಜೆಪಿ ಮತ್ತು ಮೋದಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮರಿಸ್ವಾಮಿ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago