_vs humans,
ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ.
ಮೊದಲ ಪ್ರಕರಣದಲ್ಲಿ ಗಂಗನದೊಡ್ಡಿ ಗ್ರಾಮದ ನೌಕತ್ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಕುರಿ ಸ್ಥಳದಲ್ಲಿಯೇ ಮೃತಪಟ್ಟಿದೆ.
ಮತ್ತೊಂದು ಪ್ರಕರಣದಲ್ಲಿ ರಾಮಾಪುರ ಗ್ರಾಮದ ರೈತ ರವಿ ಎಂಬವರ ಜಮೀನಿನಲ್ಲಿ ಕಟ್ಟಲಾಗಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಡಿಆರ್‌ಎಫ್‌ಒ ಬಿ.ನಾಯಕ್ ನೇತೃತ್ವದಲ್ಲಿ ಸ್ಥಳಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ೩ ತಿಂಗಳುಗಳಿಂದ ಅಜ್ಜೀಪುರ, ಗಂಗನ ದೊಡ್ಡಿ, ಬಸಪ್ಪನದೊಡ್ಡಿ, ರಾಮಾಪುರ, ಭಾಗಗಳಲ್ಲಿ ಚಿರತೆ ದಾಳಿ ನಡೆಸಿ ಸುಮಾರು ೨೦ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಬೋನು ಇಟ್ಟು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಂಡಿದ್ದಾರೆ. ಆದರೆ ಚಾಲಾಕಿ ಚಿರತೆ ಬಲೆಗೆ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಸೆರೆ ಹಿಡಿಯಬೇಕು. ಕಾಡಾನೆ ದಾಳಿಯಿಂದಲೂ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿದ್ದು, ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಡುಪ್ರಾಣಿಗಳ ಹಾವಳಿ ತಪ್ಪಿಸಬೇಕು. ಕುರಿ ಹಾಗೂ ಮೇಕೆಗಳನ್ನು ಕಳೆದುಕೊಂಡಿರುವ ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…