ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ವ್ಯಕ್ತಿಯೋರ್ವ ಮಹಿಳೆಯ ಕೈಕಾಲುಗಳನ್ನು ಕಟ್ಟಿಹಾಕಿ ಚಿನ್ನಾಭರಣವನ್ನು ದೋಚಿರುವ ಘಟನೆ ಮಂಗಳವಾರ ನಡೆದಿದೆ.
ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಮಾರಿಗುಡಿ ಬೀದಿಯ ನಿವಾಸಿ ಮಹದೇವಮ್ಮ (55) ಅವರು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಕಾರ್ಯನಿಮಿತ್ತ ಮನೆಯಿಂದ ಹೊರಬಂದ ಸಂದರ್ಭದಲ್ಲಿ ವ್ಯಕ್ತಿಯು ಅವರನ್ನು ಗಮನಿಸಿ ಆಕೆಯನ್ನು ಹಿಡಿದು, ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ಕಟ್ಟಿ, ನಂತರ ಅವರ ಬಳಿ ಇದ್ದ ಸುಮಾರು 45 ಗ್ರಾಂ ಚಿನ್ನಾಭರಣ ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಕೆಲ ತಾಸುಗಳ ನಂತರ ಮಹಿಳೆಯ ಚೀರಾಟ ಶಬ್ದ ಕೇಳಿದ ಸ್ಥಳೀಯರು ಮಹದೇವಮ್ಮ ಅವರನ್ನು ರಕ್ಷಿಸಿದ್ದು, ವಿಷಯ ತಿಳಿದ ಕೂಡಲೇ ರಾಮಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮಹಿಳೆಯಿಂದ ಅಗತ್ಯ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾ. ದಿವಾಕರ ಅವರ ಲೇಖನ ಹೀಗಿದೆ;- ಕುಸಿಯುತ್ತಿರುವ ಮೌಲ್ಯಗಳ ನಡುವೆ ಗಾಂಧಿ ಪ್ರಸ್ತುತತೆ




