ಹನೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಿ ಸಿನಿಮಾ ಶೂಟಿಂಗ್ (Gopalaswamy Betta film shooting) ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯ ರೈತ ಮುಖಂಡರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ದೂರು ನೀಡಿದರು.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅರಣ್ಯ ನಿಯಮವನ್ನು ಗಾಳಿಗೆ ತೂರಿ ಮಲೆಯಾಳಿ ಸಿನಿಮಾದ ಚಿತ್ರೀಕರಣಕ್ಕೆ ಅಕ್ರಮವಾಗಿ ಅಧಿಕಾರಿಗಳೆ ಅನುಮತಿ ನೀಡಿದ್ದಾರೆ. ಹಾಗಾಗಿ ಕೂಡಲೇ ಅರಣ್ಯ ಇಲಾಖೆ ನೀತಿ ನಿಯಮ ಗಾಳಿಗೆ ತೂರಿದ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಸಿಎಂಸಿದ್ದರಾಮಯ್ಯರವರಿಗೆ ದೂರು ನೀಡಿದರು.
ಇದಲ್ಲದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ಮಾನವ ಸಂಘರ್ಷ ಮಿತಿಮೀರಿದ ಹಾಗಾಗಿ ಸಂಪುಟ ಸಭೆಯ ವೇಳೆ ಕ್ರಮಕೈಗೊಳ್ಳುವಂತೆ ರೈತ ಮುಖಂಡರು ಒತ್ತಾಯಿಸಿದರು.
ಆನ್ಲೈನ್ ಗೇಮ್ ನಿಷೇಧಿಸಿ: ಇಂದಿನ ಯುವ ಪೀಳಿಗೆ ಮೊಬೈಲ್ ನಲ್ಲಿನ ಆನ್ಲೈನ್ ಗೇಮ್ ಗಳ ಕಡೆ ಹೆಚ್ಚಿನ ಗಮನ ವಹಿಸಿರುವುದರಿಂದ ಬೆಟ್ಟಿಂಗ್ ದಂಧೆಗೆ ಸಿಲುಕಿಕೊಂಡು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಆದ್ದರಿಂದ ಆನ್ಲೈನ್ ಗೇಮ್ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…