ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಸರ್ಕಾರ ಮತ್ತೊಂದು ಜವಾಬ್ದಾರಿ ಕೊಟ್ಟು ಆದೇಶ ನೀಡಿದ್ದು, ಜಿಲ್ಲಾಧಿಕಾರಿ ಜೊತೆಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಿರ್ದೇಶಕರಾಗಿ ನೇಮಕ ಮಾಡಿದೆ.
ಅಬ್ದುಲ್ ನಜೀರ್ ಸಾಬರ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ನ ಕೇಂದ್ರ ಸ್ಥಾನ ಮೈಸೂರಿನಲ್ಲಿದ್ದು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರಿಗೆ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ.
ಕಳೆದ ಒಂದು ವಾರದಿಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದ್ದು, ಚಾಮರಾಜನಗರ ಡಿಸಿಗೆ ಹೆಚ್ಚುವರಿ ಜವಾಬ್ದಾರಿ ಕೊಡಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಿಇಓ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಬೇಕಿದೆ.
ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿರುವ ಶಿಲ್ಪಾನಾಗ್ ಅವರಿಗೆ ಈ ಜವಾಬ್ದಾರಿ ಕೊಟ್ಟಿದ್ದು, ರಾಜ್ಯ ಸರ್ಕಾರದ ನಡೆಗೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.





