ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.
ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.
ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.
ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.
ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.
ಚಾನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.
ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…