ಚಾಮರಾಜನಗರ

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ ಸತತ ಮಳೆಯ ನಡುವೆಯೂ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಪಟಾಕಿ ಮಾರಾಟ ಮಳಿಗೆಗಳು ಈಗಾಗಲೇ ಆರಂಭಗೊಂಡಿದೆ.

ಬೆಳಕಿನ ಹಬ್ಬ ದೀಪಾವಳಿ ಅ.24 ರಿಂದ 26 ರತನಕ 3ದಿನ ನಡೆಯಲಿದ್ದು ಈ ದಿನಗಳಂದು ರಾತ್ರಿ 8ರಿಂದ 10 ಗಂಟೆ ಒಳಗೆ ಹೆಚ್ಚು ಶಬ್ದ ಹಾಗೂ ಹೊಗೆ ಸೂಸದ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕೆಂದು ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣಪಂಚಾಯಿತಿ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಬೇಕಿದೆ.ಪರಿಸರ ಇಲಾಖೆ, ಪೊಲೀಸ್, ಅಗ್ನಿಶಾಮಕಠಾಣೆ, ನಗರ ಸ್ಥಳೀಯ ಸಂಸ್ಥೆ ಅಭಿಪ್ರಾಯವನ್ನು ಕ್ರೋಢಿಕರಿಸಿ ಅಂತಿಮವಾಗಿ ಜಿಲ್ಲಾಧಿಕಾರಿ ಅವರಿಂದ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ.

ಗುರುವಾರದವರೆಗೆ ಚಾ.ನಗರದಲ್ಲಿ 9 ಗುಂಡ್ಲುಪೇಟೆ 7 ಕೊಳ್ಳೇಗಾಲ 4
ಯಳಂದೂರು 5 ಮತ್ತು ಹನೂರಿನಲ್ಲಿ 3 ಸೇರಿ ಒಟ್ಟು 28 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ.

ಪ್ರಾರಂಭ ಆಗುವುದು ಅ.24ರ ನರಕ ಚತುರ್ದಶಿಯಿಂದ. ಅಲ್ಲಿಯವರೆಗೆ ಇನ್ನಷ್ಟು ಮಾರಾಟಗಾರರು ಪಟಾಕಿ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅವರಿಂದ ಅನುಮತಿ ಪಡೆುುಂವ ಸಾಧ್ಯತೆ ಇದೆ.

ಚಾ‌ನಗರದಲ್ಲಿ ಮೆಘಾ ಕಾಂಪ್ಲೆಕ್ಸ್ ಹಿಂಭಾಗ‌ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿಸಲಾಗಿದೆ. ನಿರ್ಜನ ಪ್ರದೇಶದಲ್ಲಿ ವಿಶಾಲ ಇರುವೆಡೆ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಅಂತರ ಇರುವಂತೆ ತೆರೆಯಲು ಸೂಚಿಸಲಾಗಿದೆ. ಪಟಾಕಿ ರಾಜಧಾನಿ ಎನಿಸಿಕೊಂಡಿರುವ ಶಿವಕಾಶಿ ಸೇರಿದಂತೆ ಎಲ್ಲೆಡೆ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿ ಪಟಾಕಿಗಳನ್ನೇ ಉತ್ಪಾದಿಸಲಾಗುತ್ತಿದೆ. ಆದರೂ ಎಲ್ಲಾದರೂ ಅನ್ಯ ಪಟಾಕಿ ಕಂಡು ಬಂದರೆ ಅವುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗುತ್ತದೆ.

ಪಟಾಕಿ ಬಳಕೆಯಿಂದ ಆ ಕ್ಷಣಕ್ಕೆ ಖುಷಿ ಸಿಗಬಹುದು.ಆದರೆ ಅವುಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಪರಿಣಾಮಗಳು ಅಪಾಯಕಾರಿ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.

andolana

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

3 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

3 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

5 hours ago