Mysore
26
overcast clouds

Social Media

ಗುರುವಾರ, 07 ಮೇ 2026
Light
Dark

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.

ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ ಮಾನವ ಸಂಘರ್ಷ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಮಿತಿ ವರದಿಯ ಮೇರೆಗೆ ಹಂತಹಂತವಾಗಿ ಮರು ಸಫಾರಿ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಡಲಾಗಿದೆ. ಸಚಿವರ ಆದೇಶದಂತೆ ಸಫಾರಿ ಕೂಡ ಆರಂಭವಾಗಲಿದೆ.

ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅನ್ನದಾತರು, ಒಂದು ವೇಳೆ ಪ್ರಾಣ ಹಾನಿ ಸಂಭವಿಸಿದರೆ ಸರ್ಕಾರವೇ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಅಲ್ಲದೇ ಸಫಾರ ಆರಂಭ ಮಾಡಿದರೆ ಮತ್ತೆ ರೈತರು ಹೋರಾಟ ಮತ್ತು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

 

Tags:
error: Content is protected !!