gst chamaraj nagar
ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ನಡೆದ ಜಿಎಸ್‌ಟಿ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ದೇಶ ಒಂದು ತೆರಿಗೆ ಕಲ್ಪನೆಯಲ್ಲಿ ಬಂದ ಸರಕು ಮತ್ತು ಸೇವಾ ತೆರಿಗೆ ಕಾನೂನು ತುಂಬ ಸರಳ ಮತ್ತು ಸುಲಭವಾಗಿದೆ. ದೇಶದ ಅಭಿವೃದ್ಧಿಗೆ ಜಿ.ಎಸ್.ಟಿಯು ಪೂರಕವಾಗಿದೆ. ಜಿ.ಎಸ್.ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಾದರೆ ಸ್ಥಳಿಯ ವಾಣಿಜ್ಯ ತೆರಿಗೆ ಇಲಾಖೆ ಸಂರ್ಪಕಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೆಕ್ಕ ಪರಿಶೋಧಕ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಂ.ವೆಂಕಟೇಶ್, ಜಿ.ಎಸ್.ಟಿ.ಯಲ್ಲಿ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ, ಮುಖ್ಯವಾಗಿ ಹಾಲು, ಹಣ್ಣುಗಳು, ತಾಜಾ ತರಕಾರಿ, ಮಾಂಸ ಮುಂತಾದವುಗಳಿಗೆ ಜಿ.ಎಸ್.ಟಿ. ಇಲ್ಲ ಎಂದರು.
ವಾಣಿಜ್ಯ ತೆರಿಗೆ ಇಲಾಖೆಯವರು ನೀಡಿದ ನೋಟಿಸ್ ಅಥವ ಇಂಟಿಮೇಷನ್‌ಗಳಿಗೆ ಉತ್ತರ ನೀಡದಿದ್ದರೆ ಮುಂದೆ ತೊಂದರೆಗೆ ಸಿಲುಕ ಬೇಕಾಗುತ್ತದೆ. ಆದ್ದರಿಂದ ನೋಟಿಸ್‌ಗೆ ಮರು ಉತ್ತರ ನೀಡಬೇಕಾದುದು ಆದ್ಯ ಕರ್ತವ್ಯವಾಗಿದೆ ಎಂದರು. ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸುಪ್ರಿತ್‌ದೇವ್, ಚಂದ್ರಶೇಖರ್, ಮಂಜುಕುಮಾರ್, ನಾಗರಾಜು ಲೆಕ್ಕ ಪರಿಶೋಧಕರಾದ ಬಿ.ಎಂ.ಪುಟ್ಟಮಾದಪ್ಪ, ಕಾರ್ಯದರ್ಶಿ ಮಂಜು, ಶ್ರೀಧರ್, ನವೀನ್, ಕಮಲ್‌ರಾಜ್, ಚಂದ್ರು, ರಂಗನಾಥ್, ಶಿವರಾಜು, ಕಾಮರಾಜು, ಮಣಿಕಂಠಸ್ವಾಮಿ, ರಂಗಸ್ವಾಮಿ ಹಾಜರಿದ್ದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…