ಚಾಮರಾಜನಗರ

ವಹಿವಾಟು ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು ವಾಣಿಜ್ಯ ತೆರಿಗೆ ಉಪ ಆಯುಕ್ತರಾದ ರಾಘವೇಂದ್ರ ಸುಣಗಾರ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲಾ ಲೆಕ್ಕ ಪರಿಶೋಧಕರ ಸಂಘ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಯೋಗದಲ್ಲಿ ನಡೆದ ಜಿಎಸ್‌ಟಿ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ದೇಶ ಒಂದು ತೆರಿಗೆ ಕಲ್ಪನೆಯಲ್ಲಿ ಬಂದ ಸರಕು ಮತ್ತು ಸೇವಾ ತೆರಿಗೆ ಕಾನೂನು ತುಂಬ ಸರಳ ಮತ್ತು ಸುಲಭವಾಗಿದೆ. ದೇಶದ ಅಭಿವೃದ್ಧಿಗೆ ಜಿ.ಎಸ್.ಟಿಯು ಪೂರಕವಾಗಿದೆ. ಜಿ.ಎಸ್.ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಾದರೆ ಸ್ಥಳಿಯ ವಾಣಿಜ್ಯ ತೆರಿಗೆ ಇಲಾಖೆ ಸಂರ್ಪಕಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೆಕ್ಕ ಪರಿಶೋಧಕ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಂ.ವೆಂಕಟೇಶ್, ಜಿ.ಎಸ್.ಟಿ.ಯಲ್ಲಿ ಎಲ್ಲಾ ವಸ್ತುಗಳು ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ, ಮುಖ್ಯವಾಗಿ ಹಾಲು, ಹಣ್ಣುಗಳು, ತಾಜಾ ತರಕಾರಿ, ಮಾಂಸ ಮುಂತಾದವುಗಳಿಗೆ ಜಿ.ಎಸ್.ಟಿ. ಇಲ್ಲ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯವರು ನೀಡಿದ ನೋಟಿಸ್ ಅಥವ ಇಂಟಿಮೇಷನ್‌ಗಳಿಗೆ ಉತ್ತರ ನೀಡದಿದ್ದರೆ ಮುಂದೆ ತೊಂದರೆಗೆ ಸಿಲುಕ ಬೇಕಾಗುತ್ತದೆ. ಆದ್ದರಿಂದ ನೋಟಿಸ್‌ಗೆ ಮರು ಉತ್ತರ ನೀಡಬೇಕಾದುದು ಆದ್ಯ ಕರ್ತವ್ಯವಾಗಿದೆ ಎಂದರು. ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಸುಪ್ರಿತ್‌ದೇವ್, ಚಂದ್ರಶೇಖರ್, ಮಂಜುಕುಮಾರ್, ನಾಗರಾಜು ಲೆಕ್ಕ ಪರಿಶೋಧಕರಾದ ಬಿ.ಎಂ.ಪುಟ್ಟಮಾದಪ್ಪ, ಕಾರ್ಯದರ್ಶಿ ಮಂಜು, ಶ್ರೀಧರ್, ನವೀನ್, ಕಮಲ್‌ರಾಜ್, ಚಂದ್ರು, ರಂಗನಾಥ್, ಶಿವರಾಜು, ಕಾಮರಾಜು, ಮಣಿಕಂಠಸ್ವಾಮಿ, ರಂಗಸ್ವಾಮಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

2 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

2 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

2 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

2 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

2 hours ago