ಚಾಮರಾಜನಗರ

ಚಾ.ನಗರ ಜಿಲ್ಲೆಯಲ್ಲಿ ಜಿಟಿ ಮಳೆ; ಜನಜೀವನ ಅಸ್ತವ್ಯಸ್ತ

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ ಆವರಿಸಿತ್ತು.

ಮಳೆಯಿಂದ ಬೀದಿಬದಿ ಮತ್ತು ತಳ್ಳುಗಾಡಿ ವ್ಯಾಪಾರ ಸಂಪೂರ್ಣ  ಸ್ಥಬ್ಧ ವಾಗಿತ್ತು. ಜನತೆ ರೈನ್ ಕೋಟ್, ಛತ್ರಿ ಅವಲಂಬಿಸಿ ಹೊರಬರಬೇಕಾಯಿತು. ರಸ್ತೆಗಳಲ್ಲಿ ನೀರು ಹರಿದಾಡಿತು. ಹೇಳಿಕೊಳ್ಳುವಂತಹ ಜನರಿಲ್ಲದೆ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿನ ಮೇಲೆ ಪರಿಣಾಮ ಬೀರಿತು.ಇನ್ನು ಗ್ರಾಮೀಣ ಭಾಗದಲ್ಲಿ ಕೃಷಿಚಟುವಟಿಕೆಗಳಿಗೆ ತೊಂದರೆ ಆಯಿತು. ಕುರಿ, ಮೇಕೆ ಹಾಗೂ ದನಕರುಗಳನ್ನು ಮೇಲೂ ಬಿಡಲಾಗದೆ ಒಳಗೂ ಕಟ್ಟಲಾಗದೆ ಇಕ್ಕಟ್ಟಿನ ಪರಿಸ್ಥಿತಿ ಎದುರಿಸುವಂತಾಯಿತು.ಹಸಿಕಡಲೆ, ಜೋಳ, ರಾಗಿ, ಹುರುಳಿ, ಕೊತ್ತಂಬರಿ, ಭತ್ತ, ಮುಸುಕಿನಜೋಳ ಮೊದಲಾದ ಬೆಳೆಗಳು ವಿವಿಧ ಹಂತದಲ್ಲಿವೆ. ಈ ಬೆಳೆಗಳು ಕಟಾವು ಹಂತದಲ್ಲಿ ಇಲ್ಲದಿರುವುದರಿಂದ ಮಳೆಯಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಾರೆ ಕೃಷಿ ಇಲಾಖೆ ಆಧಿಕಾರಿಗಳು. ಆದರೆ ಸತತವಾಗಿ ಜೋರುಮಳೆ ಹಿಡಿದರೆ ಕೊತ್ತಂಬರಿ ಬೆಳವಣಿಗೆ ಕುಂಠಿತವಾಗುವ ಅಪಾಯವಿದೆ. ಇನ್ನು ಅರಿಶಿನ ಮತ್ತು ಭತ್ತಕ್ಕೆ ವಿಶೇಷವಾಗಿ ತರಕಾರಿ ಬೆಳೆಗಳಿಗೆ ರೋಗ ರುಜಿನ ಬಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಕೃಷಿ ತಜ್ಞರ ಅಭಿಪ್ರಾಯ.

 

ಜಿಟಿ ಮಳೆಯಿಂದ ಕೃಷಿ ಬೆಳೆಗಳಿಗೆ ಅಂತಹ ಸಮಸ್ಯೆ ಇಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳಿದ್ದರೆ ತೊಂದರೆಯಾಗುತ್ತಿತ್ತು.

-ಮಧುಸೂದನ್, ಜಂಟಿ ಕೃಷಿ ನಿರ್ದೇಶಕ.

ಮಳೆ ಬಿರುಸಾಗುವ ಮುನ್ಸೂಚನೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಮಳೆ ಇನ್ನೂ ಜಾಸ್ತಿಯಾಗುವ ಸಂಭವವಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದವರೆಗೂ ಮಳೆ ಬೀಳುವ ಮುನ್ಸೂಚನೆ ಇದೆ.

-ಎಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago