ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ ಮಹೇಶ್ ನೇಮಕಗೊಂಡಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರನ್ನು ಗುರುತಿಸಿ ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್ ಶಿಫಾರಸ್ಸಿನ ಮೇರೆಗೆ ಸಮಿತಿ ಸದಸ್ಯರಾಗಿ ರಾಜ್ಯಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ವಿವಿಧ ದಲಿತಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮಹೇಶ್, ಅನ್ಯಾಯದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಡಾ.ಬಾಬಾ ಸಾಹೇಬ್ ಅಂಂಬೇಡ್ಕರ್, ಬಾಬು ಜಗಜೀವನ ರಾಂ ಸಂಘಟನೆಯ ಸದಸ್ಯರಾಗಿಯೂ ತೊಡಗಿಸಿಕೊಂಡಿರುವ ಇವರು, ಯುವ ಸಂಘಟಕರನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನನ್ನನ್ನು ಗುರುತಿಸಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಶಾಸಕ ಗಣೇಶ್ ಪ್ರಸಾದ್, ಮುಖಂಡರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.



