ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು.
ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಮುಂದುವರೆಯುತ್ತಾರಾ, ಡಿ.ಕೆ.ಶಿವಕುಮಾರ್ ಅಥವಾ ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗ್ತಾರಾ ಅನ್ನೋದು ಮುಖ್ಯವಲ್ಲ
ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತಂದಿಲ್ಲ ಎಂದು ಟೀಕಿಸಿದರು.
ಗೃಹಲಕ್ಷ್ಮೀ ಯೋಜನೆಯ ಹಣ ಬಾಕಿಯಿದ್ದು, ಸರ್ಕಾರಿ ನೌಕರರಿಗೆ ಸಂಬಳವೂ ತಡವಾಗಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯರು, ಔಷಧಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿಲ್ಲದ ಸ್ಥಿತಿ ಇದೆ ಹಾಗೂ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಸರ್ಕಾರ ಹೇಳಿದ್ದರೂ, ಇದುವರೆಗೂ ಅದು ಜಾರಿಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಗೊಂದಲದ ಪರಿಸ್ಥಿತಿಗೆ ಸಿಲುಕಿದ್ದಾರೆ. ಕೇಂದ್ರ ಶಿಕ್ಷಣ ನೀತಿಯೂ ಇಲ್ಲ, ರಾಜ್ಯದ ಹೊಸ ಶಿಕ್ಷಣ ನೀತಿಯೂ ಇಲ್ಲದ ಕಾರಣ ವಿದ್ಯಾರ್ಥಿಗಳ ಭವಿಷ್ಯ ಕುರಿತು ಚರ್ಚೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿವೆ:
ಇದೇ ವೇಳೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಹಾಗೂ ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾತನಾಡಿದ ಸಂಸದರು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಇದು ಎತ್ತಿ ತೋರಿಸುತ್ತದೆ. ಸ್ಥಳೀಯ ಪೊಲೀಸ್ ಇಲಾಖೆಯ ವೈಫಲ್ಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ ಹಾಗೂ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಿವೆ ಎಂದು ಟೀಕಿಸಿದರು.
ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…