ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ ಪಶು ವೈದ್ಯ ಡಾ.ಮುಜಾಹಿದ್ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಸುಟ್ಟು ಹಾಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂರಕ್ಷಿತಾರಣ್ಯದ ನಿರ್ದೇಶಕರಾದ ದೀಪ ಕಂಟ್ರ್ಯಾಕ್ಸ್ ಹುಲಿ ಕಳೇಬರ ದೊರೆತ ಸ್ಥಳದಲ್ಲಿ ಹುಲಿಗಳ ಹೆಚ್ಚು ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು ಕಾದಾಟದಲ್ಲಿ ಅಶಕ್ತ ಹುಲಿ ಮೃತಪಟ್ಟಿರಬಹುದು.
ಹುಲಿಯನ್ನು ಬೇಟೆಯಾಡಿರುವ ಲಕ್ಷಣಗಳಿಲ್ಲ.
ವಿಷ ಪ್ರಶಾನದಿಂದಲೂ ಸಾವಿಗೀಡಾಗಿಲ್ಲ. ಸ್ಥಳದಲ್ಲೇ ಹುಲಿಯ ಚರ್ಮ, ಉಗುರುಗಳು ಪತ್ತೆಯಾಗಿವೆ. ಹುಲಿಯ ಕಳೇಬರವನ್ನು ಸಂಪೂರ್ಣ ಸ್ಕ್ಯಾನಿಂಗ್ ಮಾಡಿ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಅವರ ಸೂಚನೆಯಂತೆ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…