ಚಾಮರಾಜನಗರ

ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ನೆಲಕಚ್ಚಿದ ಅಪಾರ ಪ್ರಮಾಣದ ಬಾಳೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ.

ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.‌24) ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದ್ದು, ಲಕ್ಷಾಂತರ ರೂಪಾಯಿಯ ಮೌಲ್ಯ ನಷ್ಟ ಸಂಭವಿಸಿದೆ.

ಈ ದುರಂತ ಶಿವಪುರ ಗ್ರಾಮದ ಸಿದ್ದಪ್ಪ, ಸೋಮಪ್ಪ, ಸದಾನಂದ, ಸುರೇಶ್ ಎಂಬುವರ ಜಮೀನಿನಲ್ಲಿ 6 ಸಾವಿರಕ್ಕೂ ಅಧಿಕ ಬಾಳೆ ಬೆಳೆ ಫಸಲು ಬಿಡುವ ಹಂತದಲ್ಲಿತ್ತು. ಆದರೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಎಲ್ಲವೂ ನೆಲಕಚ್ಚಿದೆ.

ಈ ಮಳೆ ಒಂದೆಡೆ ಹರ್ಷ ತಂದರೆ ಮತ್ತೊಂದೆಡೆ ಬೆಳೆ ನಷ್ಟಕ್ಕೆ ಕಾರಣವಾಗಿದೆ. ಬೆಳೆಹಾನಿಗೆ ಒಳಗಾಗಿದ್ದ ಜಮೀನುಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಲೀಲಾವತಿ ಹಾಗೂ ಗ್ರಾಮ ಆಡಳಿತಾಧಿಕಾರಿ ಅರುಣ್ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

10 mins ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

12 mins ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

18 mins ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

26 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

30 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago