ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ರಾತ್ರಿ ಸಾಕಾನೆಗಳು ಹಾಗೂ ಡ್ರೋನ್ ಕ್ಯಾಮರಾ ಸಹಾಯದಿಂದ ಸೆರೆ ಹಿಡಿದಿದ್ದಾರೆ.
ಸೆರೆಯಾಗಿರು ಹುಲಿಗೆ ಸುಮಾರು ಹನ್ನೊಂದು ವರ್ಷವಾಗಿದೆ ಎಂದು ಅಂದಾಜಿಸಲಾಗಿದೆ. ಹುಲಿ ಸೆರೆಗೆ ಆಗ್ರಹಿಸಿದ್ದ ಗ್ರಾಮಸ್ಥರು ಕಳೆದ ನಾಲ್ಕು ದಿನದ ಹಿಂದೆ ಒಂದೂವರೆ ವರ್ಷದ ಹುಲಿಮರಿಯನ್ನು ಸೆರೆ ಹಿಡಿಯಲಾಗಿದ್ದು ಮತ್ತೆ ಅದೇ ಜಾಗದಲ್ಲಿ ತಾಯಿ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದರು.
ಈಗ ಸೆರೆಯಾಗಿರುವ ಹುಲಿಯೊಂದಿಗೆ ಮತ್ತೊಂದು ಮರಿಯೂ ಇರುವ ಅನುಮಾನ ವ್ಯಕ್ತವಾಗಿದ್ದು ಅದನ್ನು ಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸೆರೆ ಹಿಡಿದ ಹುಲಿಯನ್ನು ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲಾಗಿದೆ ಎಂದು ವಲಯಾಧಿಕಾರಿ ಪುನೀತ್ ತಿಳಿಸಿದ್ದಾರೆ.
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…