ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು – ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್ ಸಮೀಪ ಸೋಮವಾರ ನಡೆದಿದೆ.
ಗುಂಡ್ಲುಪೇಟೆ ಕಡೆಯಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೈಸೂರಿನ ಕಡೆಗೆ ಶಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕೆಎಲ್ 09 ಎಹೆಚ್5778 ಸಂಖ್ಯೆಯ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮನು ಹಾಗೂ ದೊರೆಸ್ವಾಮಿ ರವರಿಗೆ ತೀವ್ರ ಗಾಯವಾಗಿದ್ದು ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳು ಶಿವಮೊಗ್ಗ ಮೂಲದವರೆಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಪಕ್ಕದಲ್ಲಿ ನಿಂತಿದ್ದ ಅರೆಪುರ ಗ್ರಾಮದ ಬೈಕಿಗೂ ಸಹ ಗುದ್ದಿದ್ದು ಬೈಕ್ ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಕರಣ ದಾಖಲಿಸಿಕೊಂಡಿದ್ದಾರೆ.





