ಚಾಮರಾಜನಗರ

ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ

ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು – ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್ ಸಮೀಪ ಸೋಮವಾರ ನಡೆದಿದೆ.
ಗುಂಡ್ಲುಪೇಟೆ ಕಡೆಯಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೈಸೂರಿನ ಕಡೆಗೆ ಶಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕೆಎಲ್ 09 ಎಹೆಚ್5778 ಸಂಖ್ಯೆಯ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮನು ಹಾಗೂ ದೊರೆಸ್ವಾಮಿ ರವರಿಗೆ ತೀವ್ರ ಗಾಯವಾಗಿದ್ದು ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳು ಶಿವಮೊಗ್ಗ ಮೂಲದವರೆಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಪಕ್ಕದಲ್ಲಿ ನಿಂತಿದ್ದ ಅರೆಪುರ ಗ್ರಾಮದ ಬೈಕಿಗೂ ಸಹ ಗುದ್ದಿದ್ದು ಬೈಕ್ ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago