ಚಾಮರಾಜನಗರ

ಗುಂಡ್ಲುಪೇಟೆ | ವಿದ್ಯಾರ್ಥಿಯನ್ನು ಚುಡಾಯಿಸುತ್ತಿದ್ದ ಕಿರಿಕ್ ಪ್ರೇಮಿ ಬಂಧನ

ಗುಂಡ್ಲುಪೇಟೆ : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ, ಆಕೆ ಒಲ್ಲೆ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈಗ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ ಗುಂಡ್ಲುಪೇಟೆಯ ಜೆ.ಎಸ್.ಎಸ್. ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಸಮಯದಲ್ಲಿ ಗುಂಡ್ಲುಪೇಟೆ ಪಟ್ಟಣದ ಅಯೂಬ್ ಎಂಬಾತನ ಪರಿಚಯವಾಗಿತ್ತು. ನಂತರ ವಿದ್ಯಾರ್ಥಿನಿ ಮೈಸೂರಿನ ಕಾಲೇಜಿಗೆ ಬಿಎ ಓದಲು ಸೇರಿಕೊಂಡಿದ್ದು, ಪ್ರತಿದಿನ ಊರಿನಿಂದ ಕಾಲೇಜಿಗೆ ಹೋಗಿ ಬರುತ್ತಿದ್ದರು.

ಆ.೨೧ರಂದು ಮೈಸೂರಿಗೆ ಕಾಲೇಜಿಗೆ ಹೋಗಿ, ತರಗತಿ ಮುಗಿಸಿಕೊಂಡು ವಾಪಸ್ ಊರಿಗೆ ಹೋಗಲು ಗುಂಡ್ಲುಪೇಟೆ ಬಸ್ ನಿಲ್ದಾಣಕ್ಕೆ ಸಂಜೆ ಸುಮಾರು ೫ ಗಂಟೆಗೆ ಬಂದ ವೇಳೆಯಲ್ಲಿ ಅಯೂಬ್ ನನ್ನನ್ನು ಹಿಂಬಾಲಿಸಿಕೊಂಡು ಬಂದು ‘ನನ್ನನ್ನು ನೀನು ಏಕೆ ಮಾತನಾಡಿಸುವುದಿಲ್ಲ. ನೀನು ಎಂದರೆ ನನಗೆ ಇಷ್ಟ’ ಎಂದ. ನಾನು ಇವೆಲ್ಲಾ ಬೇಡ ಎಂದರೂ ಕೇಳದೆ ನನ್ನನ್ನು ಹಿಂಬಾಲಿಸಿ ನನಗೆ ತೊಂದರೆ ಕೊಡುತ್ತಿದ್ದನು. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

ಪಟ್ಟಣ ಪೊಲೀಸರು ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ, ನಂತರ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago