ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ದೇಶ ವಿಭಜನೆ ಎಂಬ ಪಿಡುಗು ಕಾಂಗ್ರೆಸ್ ಡಿಎನ್ಎ ದಲ್ಲೇ ಬಂದಿದೆ. ಸ್ವಾತಂತ್ರದ ದಿನದಿಂದಲೂ ದೇಶವನ್ನು ಹೊಡೆದು ಆಳುವ ನೀತಿಯನ್ನು ಕಾಂಗ್ರೆಸ್ ಮಾಡಿಕೊಂಡು ಬಂದಿದೆ.
ಇದರ ಮುಂದುವರೆದ ಭಾಗವಾಗಿ ಇಂದಿನ ಕಾಂಗ್ರೆಸ್ ನವರು ದೇಶ ಒಡೆಯುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಡಿ.ಕೆ ಸುರೇಶ್ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರುಗಳ ವರ್ತನೆಯು ಅದೇ ರೀತಿಯಾಗಿದೆ ಎಂದು ಕಿಡಿಕಾರಿದರು.
ಕೂಡಲೇ ಡಿ.ಕೆ ಸುರೇಶ್ ರವರನ್ನ ಸಂಸತ್ ಸದ್ಯಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನೆ ನಡಸುತ್ತಾ ಗುಂಡ್ಲುಪೇಟೆ ತಾಲೂಕು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…