ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್ ಹಾಗೂ ಇವರ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ಮೃತಪಟ್ಟಿರುವವರು.
ಮಂಗಳವಾರ ಶಶಿಧರ್ ಪತ್ನಿ ಹಾಗೂ ತಾಯಿ ಜೊತೆ ಬೈಕ್ ನಲ್ಲಿ ಎಚ್. ಡಿ.ಕೋಟೆ ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿದ್ದರು. ಸಂಜೆ ವಾಪಸ್ ಗುಂಡ್ಲುಪೇಟೆ- ಮೈಸೂರು ಹೆದ್ದಾರಿ ಮಾರ್ಗವಾಗಿ ಕೂಡ್ಲಾಪುರಕ್ಕೆ ಬರುತ್ತಿದ್ದರು. ಹಿರೀಕಾಟಿ ಬಸ್ ನಿಲ್ದಾಣದ ಬಳಿ ಬೈಕ್ ಬರುತ್ತಿದ್ದಂತೆ ರಾತ್ರಿ 7.30 ಗಂಟೆ ಸಮಯದಲ್ಲಿ ನಂಜನಗೂಡು ಕಡೆಯಿಂದ ಬಂದಂತಹ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಓಡಿಸುತ್ತಿದ್ದ ಶಶಿಧರ್, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ನೆಲಕ್ಕೆ ಬಿದ್ದರು. ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.
ವಿಷಯ ತಿಳಿದು ಸ್ಥಳಕ್ಕೆ ಬೇಗೂರು ಪೊಲೀಸ್ ಠಾಣೆ ಎಸ್ .ಐ. ಚರಣ್ ಗೌಡ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ಬಳಿಕ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಿದರು. ಕಾರನ್ನು ವಶಕ್ಕೆ ಪಡೆದಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…