elephant
ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ ಆಸುಪಾಸಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಡಂಚಿನ ಗ್ರಾಮಗಳಾದ ಮಂಚಹಳ್ಳಿ, ಆಲತ್ತೂರು, ಶಿವಕುಮಾರಪುರದಲ್ಲಿ ಆನೆಗಳು, ಕಾಡುಹಂದಿ ಹಾಗೂ ಜಿಂಕೆಗಳು ಭಾರೀ ಉಪಟಳ ನೀಡುತ್ತಿದ್ದು, ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಕಾಡಂಚಿನಲ್ಲಿ ಸೋಲಾರ್ ಪೆನ್ಸ್ ಇದ್ದು ಇಲ್ಲದಂತಾಗಿದ್ದು, ಸಂಜೆಯ ವೇಳೆಗೆ ಕಾಡಾನೆಗಳು ಕಂದಕವನ್ನು ದಾಟಿ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಿವೆ. ಬೆಳೆ ರಕ್ಷಣೆಗೆಂದು ರೈತರು ಪ್ರಾಣವನ್ನೂ ಲೆಕ್ಕಿಸದೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ಸರ್ಕಾರ ಕ್ರಮ ವಹಿಸಬೇಕು ಎಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.
ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…