ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಮಂಚಳ್ಳಿ ಗ್ರಾಮದ ನಾಗೇಶ್ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು ನೋಡಿದಾಗ ಎಲ್ಲಾ ಮೇಕೆಗಳನ್ನು ಒತ್ತೊಯ್ದಿರುವ ಬಗಗ್ಗೆ ತಿಳಿದು ಬಂದಿದೆ. ಜೀವನಾಧಾರಕ್ಕಾಗಿ ಮೇಕೆಗಳನ್ನು ಸಾಕುತ್ತಿದ್ದ ರೈತ ನಾಗೇಶ್ ಈಗ ಕಂಗಾಲಾಗಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ತಾಲೂಕಿ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.