ಗುಂಡ್ಲುಪೇಟೆ: ತಾಲ್ಲೂಕಿನ ಸಂಪಿಗೆಪುರದ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಆ ಭಾಗದ ಜನರು ಭಯಭೀತರಾಗಿದ್ದಾರೆ.
ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ರೈತರು ಭಯಭೀತರಾಗಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ದೂರದ ಕಾಡಿಗೆ ಬಿಡಬೇಕೆಂದು ಆಗ್ರಹಿಸಿದ್ದಾರೆ.
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಮೀನಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದು, ಸಾಕುಪ್ರಾಣಿಗಳ ಮೇಲೆ ದಾಳಿಯಾಗುವ ಆತಂಕ ವ್ಯಕ್ತಪಡಿಸಿದ್ದಾರೆ.





