ಗುಂಡ್ಲುಪೇಟೆ : ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದ ಹೊರವಲಯದ ವೀರಬಸಪ್ಪ ದೇವಸ್ಥಾನ ಸಮೀಪವಿರುವ ದೊಡ್ಡಯ್ಯನಕಟ್ಟೆ ಸುತ್ತಮುತ್ತ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹುಲಿಯನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚಲನವಲನವಿರುವ ಬಗ್ಗೆ ಖಚಿತಪಡಿಸಿದ್ದು ಹುಲಿ ಸೆರೆಗೆ ಬೋನು ಇರಿಸುವುದಾಗಿ ತಿಳಿಸಿದರು.
ಗ್ರಾಮಸ್ಥ ನವೀನ್ ಮಾತನಾಡಿ, ಹುಲಿ ಮನುಷ್ಯರ ಮೇಲೆ ದಾಳಿ ನಡೆಸುವ ಮುನ್ನ ಅರಣ್ಯ ಇಲಾಖೆ ಬೋನು ಇಟ್ಟು ಹುಲಿ ಸೆರೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.





