Gundlupet Villagers master plan
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರೇ ಸ್ವತಃ ಕಾನೂನನ್ನು ಕೈಗೆ ತೆಗೆದುಕೊಂಡು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ, ಜೂಜಾಟದಂತಹ ಅನೈತಿಕ ಚಟುವಟಿಕೆಗಳು ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ 50 ಸಾವಿರ ದಂಡ,
ಜೂಜಾಟವಾಡಿದರೆ 50 ಸಾವಿರ ದಂಡ, ಗ್ರಾಮಕ್ಕೆ ಅನಧಿಕೃತ ವ್ಯಕ್ತಿ ಪ್ರವೇಶ ಮಾಡಿದರೆ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ತಪ್ಪು ಮಾಡಿರುವವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ಅಂತಹ ವ್ಯಕ್ತಿಗಳಿಗೆ 10 ಸಾವಿರ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಗ್ರಾಮದ ಯಜಮಾನರುಗಳೇ ಘೋಷಣೆ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿರುವ ಗ್ರಾಮಸ್ಥರು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…