ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್ ಬಳಿ ನಡೆದಿದೆ.
ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ರಿಯಾಜ್, ಸುಲ್ತಾನ, ಹನೀಫ್, ಮಹಮ್ಮದ್ ರಿಯಾಜ್, ಪಾತೀಯ ಹಾಗೂ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಪಾಯವಾಗಿಲ್ಲ.
ಘಟನೆ ಸಂಬಂಧ ಕೂಡಲೇ ಸ್ಥಳಕೆ ಆಗಮಿಸಿದ ಬೇಗೂರು ಪೊಲೀಸ್ ಠಾಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.





