ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ.
ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತ ದುರ್ದೈವಿಗಳು.
ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟಿಟಿಯಲ್ಲಿ ತೆರಳುತ್ತಿದ್ದ ಸುಮಾರು 5 ರಿಂದ 6 ಮಂದಿಗೆ ಗಾಯಗಳಾಗಿದ್ದು, ಗುಂಡ್ಲುಪೇಟೆ ಆಸ್ಪತ್ರೆಗೆ ರವಾನಿಸಲಾಗಿದೆ.
ಕೇರಳ ಮೂಲದ ಒಂದೇ ಕುಟುಂಬದ 8 ಮಂದಿ ಮಕ್ಕಳೊಡನೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಎದುರಿಗೆ ಬಂದ ಟಿಟಿ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಬೇಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.