Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಗುಂಡ್ಲುಪೇಟೆ: ಬಂಡೀಪುರ ಉಳಿವಿಗಾಗಿ ರೈತರ ಪ್ರತಿಭಟನೆ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್‌ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯರಾಜ್‌ ಅವರು, ಜಿಲ್ಲೆಯ ಬಂಡೀಪುರ ಅಭಯಾರಣ್ಯವು ಹುಲಿಗಳ ನಾಡಾಗಿದೆ. ಬಂಡೀಪುರದ ಮೂಲಕ ರಾತ್ರಿ ಸಂಚಾರ ಮುಕ್ತ ಮಾಡುವುದರಿಂದ ಇಲ್ಲಿನ ಕಾಡುಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಜೊತೆಗೆ ರಾತ್ರಿ ವೇಳೆ ಕಳ್ಳತನಗಳು ಹೆಚ್ಚಾಗುತ್ತವೆ. ಆದ ಕಾರಣ ರಾತ್ರಿ ಸಂಚಾರ ನಿರ್ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

 

Tags:
error: Content is protected !!