ಗುಂಡ್ಲುಪೇಟೆ: ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಬೇಕು ಎಂದು ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ʼಬಂಡೀಪುರ ಉಳಿಸಿʼ ಎಂಬ ಧೇಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯರಾಜ್ ಅವರು, ಜಿಲ್ಲೆಯ ಬಂಡೀಪುರ ಅಭಯಾರಣ್ಯವು ಹುಲಿಗಳ ನಾಡಾಗಿದೆ. ಬಂಡೀಪುರದ ಮೂಲಕ ರಾತ್ರಿ ಸಂಚಾರ ಮುಕ್ತ ಮಾಡುವುದರಿಂದ ಇಲ್ಲಿನ ಕಾಡುಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಜೊತೆಗೆ ರಾತ್ರಿ ವೇಳೆ ಕಳ್ಳತನಗಳು ಹೆಚ್ಚಾಗುತ್ತವೆ. ಆದ ಕಾರಣ ರಾತ್ರಿ ಸಂಚಾರ ನಿರ್ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…