ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.
ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.
ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.
ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…