ಚಾಮರಾಜನಗರ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ಚರಂಡಿ ನೀರು; ದ್ವೀಪದಂತಾದ ಕಂದೇಗಾಲ ಗ್ರಾಮ

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.

ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.

ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago