ಚಾಮರಾಜನಗರ

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, ಕುಮಾರ್ ಮೃತಪಟ್ಟಿದ್ದು ಮಹಿಮದಾಸ್ ಮೈಸೂರಿನ ನಾರಾಯಣ ಹೃದಯಲಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನಜಾವ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂರು ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಉದ್ರಿಕ್ತರಿಂದ ಪೀಠೋಪಕರಣ ಧ್ವಂಸ: ಇನ್ನು ಮೂವರು ಮೃತಪಟ್ಟ ಮಾಹಿತಿ ತಿಳಿದು ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದು ಶಾಗ್ಯ ಡಿಆರ್ಎಫ್ಒ ಕಚೇರಿಗೆ ಒಳನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಗುಂಡೇಟಿಗೆ ಬಲಿಯಾದ ಮೂವರು ಕಳ್ಳ ಬೇಟೆಗಾರರಲ್ಲ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿಯನ್ನೇ ಮಾಡರಲಿಲ್ಲ. ಆದರೂ ಸಹ ಪ್ರತಿ ದಾಳಿಯ ಹೆಸರಿನಲ್ಲಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಮೃತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿಲ್ಲ‌. ಪ್ರತಿದಾಳಿಯ ನೆಪದಲ್ಲಿ ಮೂವರನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಪ್ರಕರಣ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವರು ಹೇಳಿದ್ದೇನು: ಘಟನೆ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳ ಜೊತೆ ಮಾತನಾಡಿದ್ದು- ಕಳ್ಳಬೇಟೆಗೆ ತೆರಳಿದ್ದವರು ಸಿಬ್ಬಂದಿ ಮೇಲೆ ನಾಡಬಂದೂಕುಗಳಿಂದ ದಾಳಿ ಮಾಡಿದಾಗ ಪ್ರತಿದಾಳಿ ಮಾಡಿದಾಗ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯರು, ಮೃತಪಟ್ಟವರು ಅಮಾಯಕರಾಗಿದ್ದು ಬೇಟೆಗೆ ಹೋಗಿರಲಿಲ್ಲ ಎನ್ನುತ್ತಿದ್ದಾರೆ, ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.

ಇನ್ನು, ಹನೂರು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟಿಸುವ ಸಾಧ್ಯತೆ ಇರುವ ಹಿನ್ನೆಲೆ ಅರಣ್ಯ ಕಚೇರಿ ಸುತ್ತಮುತ್ತಲು ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago