ಚಾಮರಾಜನಗರ

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ ಎಂದಿಗೂ ಕಡಿಮೆಯಾಗುವುದಿಲ್ಲ ಎಂಬುದಕ್ಕೆ ಗುರುವಂದನಾ ಕಾರ್ಯಕ್ರಮ ಸಾಕ್ಷಿಯಾಯಿತು.

ಪಟ್ಟಣದ ಖಾಸಗಿ ಹೋಟೆಲ್ ವೊಂದರಲ್ಲಿ ಶ್ರೀ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2006-7ನೇ ಸಾಲಿನ ಪ್ರೌಢಶಾಲಾ (ಇ ) ವಿಭಾಗದ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿದ್ಯಾರ್ಥಿಗಳು ಪುಷ್ಪವೃಷ್ಟಿಗೈದು ಶಿಕ್ಷಕರನ್ನು ವೇದಿಕೆಗೆ ಬರಮಾಡಿಕೊಂಡರು.

ಒಂದೇ ಶಾಲೆಯ ಆವರಣದಲ್ಲಿ ಕಲಿತು, 20 ವರ್ಷಗಳ ನಂತರ ಮತ್ತೆ ಒಂದೇ ವೇದಿಕೆಯಲ್ಲಿ ಸೇರಿ, ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ಸಿಹಿ-ಕಹಿ ನೆನಪುಗಳನ್ನು ವಿದ್ಯಾರ್ಥಿಗಳು ಮೆಲುಕು ಹಾಕುವ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡರು.

ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕರು, ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಸಹಮತ, ಭಾಂದವ್ಯ ಎಂಬುದು ಕಷ್ಟದ ಮಾತು, ಈ ನಡುವೆಯೂ ಗುರುಗಳ ಮೇಲಿನ ಪ್ರೀತಿ ಇಟ್ಟು ಕಾರ್ಯಕ್ರಮ ರೂಪಿಸಿರುವುದು ನಿಜಕ್ಕೂ ಶ್ಲಾಘನೀಯ. ಹಳೆಯ ವಿದ್ಯಾರ್ಥಿಗಳಲ್ಲಿರುವ ಗುರು – ಶಿಷ್ಯರ ನಡುವಿನ ಭಾಂದವ್ಯ, ಮೌಲ್ಯಗಳು ಇಂದಿನ ಜೇನ್ ಜ್ಹೀ ಪೀಳಿಗೆಯಲ್ಲಿ ಕಾಣಲು ಸಾಧ್ಯವಿಲ್ಲ. ಸಂಸ್ಕೃತಿ, ಸಂಸ್ಕಾರ ಇಲ್ಲದ ಇಂದಿನ ವಿದ್ಯಾರ್ಥಿಗಳಲ್ಲಿ ಇದನ್ನು ನಿರೀಕ್ಷಿಸಲೂ ಆಗುವುದಿಲ್ಲ. ಇಂತಹ ಸಂಧಿಗ್ದ ಪರಿಸ್ಥಿತಿಯಲ್ಲಿ ಶಿಕ್ಷಕರು ಪಾಠ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಾತ್ವಿಕ ಆಲೋಚನೆಗಳ ಮೂಲಕ ಬದುಕು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎಲ್ಲ ವೃತ್ತಿಗಳಿಗೂ ತನ್ನದೇಯಾದ ಗೌರವ ಇದೆ, ಆದರೆ ಪ್ರಾಮಾಣಿಕವಾಗಿ ನಿಭಾಯಿಸಬೇಕು. ಇಂದಿನ ತಾಂತ್ರಿಕ ಯುಗದ ಜಂಜಾಟದಲ್ಲಿ ಎಲ್ಲರೂ ಮುಳುಗಿ ಹೋಗಿದ್ದು, ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಹಣ, ನಗದು ಹೊಂದಿದ್ದ ಪರ್ಸ್ ಅನ್ನು ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಶಾಲೆಯ ಹಳೇ ವಿದ್ಯಾರ್ಥಿ ಹಾಗೂ ಕಂಡಕ್ಟರ್ ನಾಗೇಂದ್ರ ಅವರನ್ನು ಸನ್ಮಾನಿಸಲಾಯಿತು.

20 ವರ್ಷಗಳ ಅಂತರವನ್ನು ಒಂದು ದಿನದ ಆತ್ಮೀಯತೆ ಮರೆಸಿತು; ಕಾಲ ಬದಲಾದರೂ ಗುರುಗಳ ಮೇಲಿನ ಗೌರವ ಮತ್ತು ಸ್ನೇಹಿತರ ಮೇಲಿನ ಪ್ರೀತಿ ಎಂದಿಗೂ ಬದಲಾಗುವುದಿಲ್ಲ ಎಂಬ ಸಂದೇಶ ಈ ಕಾರ್ಯಕ್ರಮದಲ್ಲಿ ಕಂಡುಬಂತು.

ಶಿಕ್ಷಕರಿಗೆ ಸನ್ಮಾನ :
ಶ್ರೀ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಿಕ್ಷಕರುಗಳಾದ ಎಸ್. ಎಸ್.ನಾಗರಾಜು, ಜಿ. ಎಸ್.ಹರೀಶ್ ಕುಮಾರ್ , ಟಿ. ಎಂ.ಮಹಾಲಕ್ಷ್ಮಿ, ಪಿ.ಜಿ.ರುದ್ರಪ್ಪ, ಬಿ.ನಾಗರಾಜು, ರಾಜೇಂದ್ರ, ಕೆ.ವಿ.ಸುರೇಶ್ , ಬಿ.ಎಸ್.ಸಾವಿತ್ರಿ, ಮಹಾದೇವಯ್ಯ, ಮಾದೇಗೌಡ, ರಾಮಚಂದ್ರ ಭಟ್, ದೇವರಾಜು, ತುಳಸಿ, ಸಿಬ್ಬಂದಿ ಮಲ್ಲಿಗಮ್ಮ ಅವರನ್ನು ಸನ್ಮಾನಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

9 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

6 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 hours ago