ಹನೂರು: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಚಾಲನೆ ನೀಡಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡೆಂಗ್ಯು ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಡಾ.ಪ್ರಕಾಶ್ ಮಾತನಾಡಿ, ಡೆಂಗ್ಯು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ. ಮನೆಮನೆಗಳಲ್ಲಿ ನಿಂತ ನೀರನ್ನು ಸ್ವಚ್ಛಗೊಳಿಸಬೇಕು. ಸಾರ್ವಜನಿಕರ ಸಹಕಾರದಿಂದಲೇ ಡೆಂಗ್ಯು ನಿಯಂತ್ರಣ ಸಾಧ್ಯ ಎಂದರು. ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಾಜೇಶ್, ಡಾ.ಮನು, ಡಾ.ಉಲ್ಲಾಶ್, ಆರೋಗ್ಯ ನಿರೀಕ್ಷಕ ನಿಂಬೇಶ್, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.





