ಚಾಮರಾಜನಗರ

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ತಾಲೂಕಿನ ಹುಣಸೆ ಪಾಳ್ಯ, ಮುನಿ ಗುಡಿದೊಡ್ಡಿ, ಕಾನುಮೇಳ ದೊಡ್ಡಿ,ಕರಿಯಪ್ಪನದೊಡ್ಡಿ ಗ್ರಾಮಸ್ಥರು ಮನವಿಯನ್ನು ಸಲ್ಲಿಸಿದ್ದಾರೆ.

ನಂತರ ಮಾತನಾಡಿದ ಗ್ರಾಮಸ್ಥರು ಕಾಡಾನೆಯೊಂದು ನಮ್ಮ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುವುದರ ಜೊತೆಗೆ ಕಳೆದ ಎರಡು ದಿನಗಳ ಹಿಂದೆ ರೈಲ್ವೆ ಬ್ಯಾರಿಕೆಡ್ ಸಹ ಮುರಿದು ಹಾಕಿದೆ.ಅಲ್ಲದೇ ತಡರಾತ್ರಿ ಮುನಿಗುಡಿ ದೊಡ್ಡಿ ಗ್ರಾಮದಲ್ಲಿ ಪ್ರಭುಸ್ವಾಮಿ ಎಂಬ ರೈತನ ಮೇಲೆ ದಾಳಿ ನಡೆಸಿ ರೈತ ಸಾವು ಬದುಕಿನ ನಡುವೆ ಹೋರಾಟ ಸಹ ನಡೆಸುತ್ತಿದ್ದಾರೆ. ಹಾಗಾಗಿ ರೈತರಿಗೆ ಸಂಕಷ್ಟವನ್ನು ತಂದು ಕೊಟ್ಟಿರುವಂತಹ ಕಾಡಾನೆ ಯನ್ನು ಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ನಾವೆಲ್ಲರೂ ಒಟ್ಟಾಗಿ ಮನವಿಯನ್ನು ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ರೀತಿ ಪರಿಣಾಮಗಳು ಉಂಟಾದಲ್ಲಿ ಅದಕ್ಕೆ ನೇರ ಹೊಣೆಗಾರರು ಅರಣ್ಯ ಇಲಾಖೆ ಹೊರಬೇಕಾಗುತ್ತದೆ. ಹಾಗಾಗಿ ಆದಷ್ಟು ಬೇಗ ಈ ಕೆಲಸವನ್ನು ಮುಗಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಮಾತನಾಡಿ ಗುರುವಾರ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಪರಿಶೀಲನೆಗೆ ಆಗಮಿಸಲಿದ್ದಾರೆ. ಈ ವೇಳೆ ಅವರ ಗಮನಕ್ಕೆ ತಂದು ಇರುವ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದರು.

ಇದೆ ಸಂದರ್ಭದಲ್ಲಿ ಗ್ರಾಮದ ಸದಾನಂದ ಸ್ವಾಮಿ, ರವಿ, ಚಿಕ್ಕಮಾದ, ಸತೀಶ್, ಸೇರಿದಂತೆ ಸಾಕಷ್ಟು ರೈತರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

2 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

2 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

3 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

3 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

3 hours ago

ಬಾಲ್ಯವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…

4 hours ago