ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಮುನಿಯಪ್ಪ (35), ಮಹೇಂದ್ರ (35) ಮತ್ತು ಸುರೇಶ್ (24) ಮೃತಪಟ್ಟ ದುರ್ದೈವಿಗಳು.
ಘಟನೆಯ ವಿವರ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸ್ನೇಹಿತರಿಂದ ಗಣಪತಿ ಪ್ರತಿಷ್ಠಾಪನೆ ಮಾಡಲು ಹಣ ಪಡೆದುಕೊಂಡು ಬರಲು ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ಸಾಲುಂಡಿ ಗ್ರಾಮದ ಕಡೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಅತಿವೇಗವಾಗಿ ಬಂದು ಹುಲಸುಗುಡ್ಡೆ ಬೋರೆ ಸಮೀಪ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಡಿಕ್ಕಿ ಹೊಡೆದ ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ನಂತರ ಕಾರ್ಯಪ್ರವೃತ್ತರಾದ ಹನೂರು ಪೊಲೀಸರು ಲೋಕನಹಳ್ಳಿ ರಸ್ತೆಯ ಚಿಕ್ಕಮಲಾಪುರ ಸಮೀಪ ಕಾರು ಮತ್ತು ಕಾರಿನಲ್ಲಿದ್ದ ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…